Video: ಬೈಕ್​ಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದ ಕಾರು ಚಾಲಕ

Updated on: Oct 30, 2025 | 8:02 AM

ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವನು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಹಿಸಾಗರ್, ಅಕ್ಟೋಬರ್ 30: ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ ಬೈಕು ಮತ್ತು ಅದರ ಚಾಲಕನನ್ನು ಮುಖ್ಯ ಹೆದ್ದಾರಿಯಲ್ಲಿ ವೇಗದಲ್ಲಿ ಎಳೆದುಕೊಂಡು ಹೋಗುತ್ತಲೇ ಇದ್ದರು. ಕೂಡಲೇ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More