AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಜ ಟೂರ್ನಿಯಿಂದ ಹೊರಬಿದ್ದ ಗುಲ್ಬರ್ಗ ಮಿಸ್ಟಿಕ್ಸ್​

ಮಹಾರಾಜ ಟೂರ್ನಿಯಿಂದ ಹೊರಬಿದ್ದ ಗುಲ್ಬರ್ಗ ಮಿಸ್ಟಿಕ್ಸ್​

ಝಾಹಿರ್ ಯೂಸುಫ್
|

Updated on: Aug 27, 2025 | 9:37 AM

Share

Gulbarga Mystics vs Bengaluru Blasters: ಈ ಮೂಲಕ 12.3 ಓವರ್​ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್​ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್​ಗೆ ಎಂಟ್ರಿ ಕೊಟ್ಟರೆ, ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಎಲ್​ಆರ್​ ಚೇತನ್ 20 ಎಸೆತಗಳಲ್ಲಿ 40 ರನ್ ಬಾರಿಸಿದರು. ಆ ಬಳಿಕ ಬಂದ ವಿಕೆಟ್ ಕೀಪರ್ ಬ್ಯಾಟರ್ ಸೂರಜ್ ಅಹುಜಾ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 44 ರನ್​ ಸಿಡಿಸಿದರು.

ಈ ಮೂಲಕ 12.3 ಓವರ್​ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್​ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.