ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ

Edited By:

Updated on: Feb 17, 2026 | 9:01 PM

ಧಾರವಾಡದ ಗುಳೇದಕೊಪ್ಪ ಗ್ರಾಮದಲ್ಲಿ ಫೆ. 12-16ರಂದು ಅದ್ಧೂರಿ ಜಾತ್ರೆ ಮತ್ತು ಐತಿಹಾಸಿಕ ನೂತನ ಶಿವರಥೋತ್ಸವ ವಿಜೃಂಭಣೆಯಿಂದ ಜರುಗಿತು. ದಶಕಗಳ ಬಳಿಕ ಮೊದಲ ಬಾರಿಗೆ ನೆರವೇರಿದ ಈ ರಥೋತ್ಸವಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು. ನಟ ಶರಣ್, ನಟಿ ಮಾಲಾಶ್ರೀ ಹಾಗೂ ವಿವಿಧ ಸ್ವಾಮೀಜಿಗಳು ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಹೊರರಾಜ್ಯಗಳ ಕಲಾತಂಡಗಳು ಜಾತ್ರೆಗೆ ಮೆರುಗು ನೀಡಿದವು.

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್ ನಟ ಶರಣ್ ಮತ್ತು ನಟಿ ಮಾಲಾಶ್ರೀ ಭಾಗವಹಿಸಿ ಅಭಿಮಾನಿಗಳನ್ನು ರಂಜಿಸಿದರು. ರಾಜಾಸ್ಥಾನ, ಒರಿಸ್ಸಾ ಸೇರಿದಂತೆ ವಿವಿಧ ಹೊರರಾಜ್ಯಗಳ ಕಲಾತಂಡಗಳು ಮತ್ತು ಸ್ಥಳೀಯ ಕಲಾವಿದರು ತಮ್ಮ ಪ್ರದರ್ಶನದ ಮೂಲಕ ಜಾತ್ರೆಯ ಮೆರುಗು ಹೆಚ್ಚಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More