Video: ವೆನೆಜುವೆಲಾದ ಅಧ್ಯಕ್ಷೀಯ ಭವನದ ಬಳಿ ಗುಂಡಿನ ದಾಳಿ, ಸ್ಫೋಟದ ಸದ್ದು

Updated on: Jan 06, 2026 | 8:07 AM

ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್​ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್ ಮಿಲಿಟರಿ ದಾಳಿಯಷ್ಟು ತೀವ್ರವಾಗಿರಲಿಲ್ಲ, ಆದರೆ ಅದು ಜನರನ್ನು ಭಯಗೊಳಿಸಿತ್ತು.

ಕ್ಯಾರಕಾಸ್, ಜನವರಿ 06: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್​ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್ ಮಿಲಿಟರಿ ದಾಳಿಯಷ್ಟು ತೀವ್ರವಾಗಿರಲಿಲ್ಲ, ಆದರೆ ಅದು ಜನರನ್ನು ಭಯಗೊಳಿಸಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More