Mass shooting in Mexico: ಮೆಕ್ಸಿಕೋದಲ್ಲಿ ಸಾಮೂಹಿಕ ಗುಂಡಿನ ದಾಳಿ, 12 ಮಂದಿ ಸಾವು
ಮೆಕ್ಸಿಕೋದ ಹಿಂಸಾಚಾರ ಪೀಡಿತ ರಾಜ್ಯವಾದ ಗುವಾನಾಜುವಾಟೊದಲ್ಲಿ ಧಾರ್ಮಿಕ ಆಚರಣೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, 20 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯ ಮೆಕ್ಸಿಕೋದ ಹಿಂಸಾಚಾರ ಪೀಡಿತ ಇರಾಪುವಾಟೊ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರಲ್ಲಿ 17 ವರ್ಷದ ಬಾಲಕನೂ ಸೇರಿದ್ದಾನೆ.
ಗುವಾನಾಜುವಾಟೊ, ಜೂನ್ 26: ಮೆಕ್ಸಿಕೋದ ಹಿಂಸಾಚಾರ ಪೀಡಿತ ರಾಜ್ಯವಾದ ಗುವಾನಾಜುವಾಟೊದಲ್ಲಿ ಧಾರ್ಮಿಕ ಆಚರಣೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, 20 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯ ಮೆಕ್ಸಿಕೋದ ಹಿಂಸಾಚಾರ ಪೀಡಿತ ಇರಾಪುವಾಟೊ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರಲ್ಲಿ 17 ವರ್ಷದ ಬಾಲಕನೂ ಸೇರಿದ್ದಾನೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಹಿಂಸಾಚಾರ ಮತ್ತು ಗ್ಯಾಂಗ್ ಚಟುವಟಿಕೆಗೆ ಹೆಸರುವಾಸಿಯಾಗಿರುವ ಗುವಾನಾಜುವಾಟೊ ರಾಜ್ಯದಲ್ಲಿ ಈ ಘಟನೆ ನಡೆದಿದೆ.
ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಈ ಹಿಂದೆ ಗುಂಡಿನ ದಾಳಿಯಲ್ಲಿ ಕೆಲವು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು, ಆದರೆ ನಂತರ ಅಟಾರ್ನಿ ಜನರಲ್ ಕಚೇರಿಯು ಗುಂಡಿನ ದಾಳಿಯಲ್ಲಿ ಒರ್ವ ಮಾತ್ರ ಅಪ್ರಾಪ್ತ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ. ಈ ಘಟನೆ ತುಂಬಾ ದುಃಖಕರ ಮತ್ತು ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಶೀನ್‌ಬಾಮ್ ಹೇಳಿದರು.
ಧಾರ್ಮಿಕ ಆಚರಣೆಯ ಸಮಯದಲ್ಲಿ ಗುಂಡಿನ ದಾಳಿ
ಸ್ಥಳೀಯ ಮಾಧ್ಯಮಗಳ ಪ್ರಕಾರ, ಜನರು ಜಾನ್ ದಿ ಬ್ಯಾಪ್ಟಿಸ್ಟ್ ಅವರ ಜನ್ಮದಿನದಂದು ಧಾರ್ಮಿಕ ಆಚರಣೆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ವಸತಿ ಸಂಕೀರ್ಣದಲ್ಲಿ ಪಾರ್ಟಿ ಮತ್ತು ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ವೇಳೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಜನರು ನೃತ್ಯ ಮಾಡುವುದನ್ನು ಮತ್ತು ನಂತರ ಗುಂಡಿನ ದಾಳಿ ನಡೆದು ಜನರು ಚೆಲ್ಲಾಪಿಲ್ಲಿಯಾಗಿ ಓಡುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
