‘ಕರಾವಳಿ’ ಸಿನಿಮಾ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?

Edited By:

Updated on: Jul 07, 2026 | 5:39 PM

ಮುಖ್ಯಾಂಶಗಳು

  • ‘ಕರಾವಳಿ’ ಸಿನಿಮಾದ ಟ್ರೇಲರ್​ನಲ್ಲಿ ಇಲ್ಲ ಪ್ರಜ್ವಲ್ ದೇವರಾಜ್ ಧ್ವನಿ.
  • ಕಾರ್ಯಕ್ರಮಕ್ಕೆ ಬಂದು ಅಸಮಾಧಾನ ವ್ಯಕ್ತಪಡಿಸಿದ ಅಭಿಮಾನಿಗಳು.
  • ಟ್ರೇಲರ್ ಪ್ರೀಮಿಯರ್ ಕಾರ್ಯಕ್ರಮಕ್ಕೆ ನಟ ಪ್ರಜ್ವಲ್ ದೇವರಾಜ್ ಗೈರು.

ತೆರೆಕಾಣಲು ಸಜ್ಜಾಗಿರುವ ‘ಕರಾವಳಿ’ ಚಿತ್ರತಂಡದ ಕಿರಿಕ್ ಈಗ ಬೀದಿಗೆ ಬಂದಿದೆ. ಈ ಚಿತ್ರದ ಡೈರೆಕ್ಟರ್ ಗುರುದತ್ ಗಾಣಿಗ ಹಾಗೂ ಹೀರೋ ಪ್ರಜ್ವಲ್ ದೇವರಾಜ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗಿದೆ. ಈ ವಿವಾದಕ್ಕೆ ಕಾರಣವೇನು ಎಂಬುದನ್ನು ಗುರುದತ್ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಬಿಡುಗಡೆಗೆ ಸಜ್ಜಾಗಿರುವ ‘ಕರಾವಳಿ’ (Karavali) ಸಿನಿಮಾ ತಂಡದ ಕಿರಿಕ್ ಈಗ ಬೀದಿಗೆ ಬಂದಿದೆ. ಈ ಸಿನಿಮಾದ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಟ ಪ್ರಜ್ವಲ್ ದೇವರಾಜ್ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ಪ್ರಜ್ವಲ್ ಅಭಿಮಾನಿಗಳು ಬಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ರೇಲರ್​ನಲ್ಲಿ ಪ್ರಜ್ವಲ್ ಅವರ ಧ್ವನಿ ಇಲ್ಲ ಎಂಬುದೇ ಫ್ಯಾನ್ಸ್ ಅಸಮಾಧಾನಕ್ಕೆ ಕಾರಣ ಆಗಿದೆ. ಆ ಬಗ್ಗೆ ‘ಟಿವಿ9 ಕನ್ನಡ’ ಜೊತೆ ನಿರ್ದೇಶಕ ಗುರುದತ್ ಗಾಣಿಗ ಅವರು ಮಾತನಾಡಿದ್ದಾರೆ. ಈ ವಿವಾದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಮಾತುಕಥೆ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ತಾವು ಸಿದ್ಧ ಎಂದು ಗುರುದತ್ ಗಾಣಿಗ ಅವರು ಹೇಳಿದ್ದಾರೆ. ಟ್ರೇಲರ್ ಪ್ರೀಮಿಯರ್ ಕಾರ್ಯಕ್ರಮಕ್ಕೆ ಪ್ರಜ್ವಲ್ ದೇವರಾಜ್ ಅವರು ಗೈರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 07, 2026 04:26 PM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More