ಗಂಡ ಸತ್ತ ದಿನವೇ ಸಂಚು ಮಾಡಿದ್ರು: ಗುರುಪ್ರಸಾದ್ ಪತ್ನಿ ಸುಮಿತ್ರಾ ಶಾಕಿಂಗ್ ಮಾತು
ಗುರುಪ್ರಸಾದ್ ನಿರ್ದೇಶನದ ‘ಎದ್ದೇಳು ಮಂಜುನಾಥ 2’ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ. ಸಿನಿಮಾ ಬಿಡುಗಡೆಗೆ ಗುರುಪ್ರಸಾದ್ ಪತ್ನಿ ಸುಮಿತ್ರಾ ಅವರು ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ಟಿವಿ9 ಜೊತೆ ಸುಮಿತ್ರಾ ಅವರ ಮಾತನಾಡಿದ್ದಾರೆ.
‘ಎದ್ದೇಳು ಮಂಜುನಾಥ 2’ ಸಿನಿಮಾದ ಕೆಲಸಗಳು ಕೊನೇ ಹಂತದಲ್ಲಿ ಇರುವಾಗ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಆ ಬಳಿಕ ‘ಎದ್ದೇಳು ಮಂಜುನಾಥ 2’ ಸಿನಿಮಾವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಕೆಲವರು ಸಂಚು ಮಾಡಿದರು ಎಂದು ಪತ್ನಿ ಸುಮಿತ್ರಾ ಆರೋಪಿಸಿದ್ದಾರೆ. ಗುರುಪ್ರಸಾದ್ ನಿಧನದ ಬಳಿಕ ಏನೆಲ್ಲ ಆಯಿತು ಎಂಬುದನ್ನು ಸುಮಿತ್ರಾ ಅವರು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.