ಗಂಡ ಸತ್ತ ದಿನವೇ ಸಂಚು ಮಾಡಿದ್ರು: ಗುರುಪ್ರಸಾದ್ ಪತ್ನಿ ಸುಮಿತ್ರಾ ಶಾಕಿಂಗ್ ಮಾತು

Edited By:

Updated on: Feb 20, 2025 | 6:57 PM

ಗುರುಪ್ರಸಾದ್ ನಿರ್ದೇಶನದ ‘ಎದ್ದೇಳು ಮಂಜುನಾಥ 2’ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ. ಸಿನಿಮಾ ಬಿಡುಗಡೆಗೆ ಗುರುಪ್ರಸಾದ್ ಪತ್ನಿ ಸುಮಿತ್ರಾ ಅವರು ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ಟಿವಿ9 ಜೊತೆ ಸುಮಿತ್ರಾ ಅವರ ಮಾತನಾಡಿದ್ದಾರೆ.

‘ಎದ್ದೇಳು ಮಂಜುನಾಥ 2’ ಸಿನಿಮಾದ ಕೆಲಸಗಳು ಕೊನೇ ಹಂತದಲ್ಲಿ ಇರುವಾಗ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಆ ಬಳಿಕ ‘ಎದ್ದೇಳು ಮಂಜುನಾಥ 2’ ಸಿನಿಮಾವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಕೆಲವರು ಸಂಚು ಮಾಡಿದರು ಎಂದು ಪತ್ನಿ ಸುಮಿತ್ರಾ ಆರೋಪಿಸಿದ್ದಾರೆ. ಗುರುಪ್ರಸಾದ್ ನಿಧನದ ಬಳಿಕ ಏನೆಲ್ಲ ಆಯಿತು ಎಂಬುದನ್ನು ಸುಮಿತ್ರಾ ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More