Video: ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ

Updated on: Feb 05, 2026 | 9:39 AM

ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆಯುತ್ತಿರುವುದನ್ನು ಕಾಣಬಹುದು. ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮನೆಗೆಲಸಗಾರರಾಗಿ ನೇಮಿಸಿಕೊಂಡು ದೌರ್ಜನ್ಯವೆಸಗುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕಿ ಸುಮಾರು ಆರು ವರ್ಷಗಳಿಂದ ಆ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುವಾಹಟಿ, ಫೆಬ್ರವರಿ 05: ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆಯುತ್ತಿರುವುದನ್ನು ಕಾಣಬಹುದು. ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮನೆಗೆಲಸಗಾರರಾಗಿ ನೇಮಿಸಿಕೊಂಡು ದೌರ್ಜನ್ಯವೆಸಗುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕಿ ಸುಮಾರು ಆರು ವರ್ಷಗಳಿಂದ ಆ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆ ಮಾಲೀಕ ಅರಿನಾ ಲಸ್ಕರ್ ಖತುನ್, ಬಾಲಕಿಯ ಮೇಲೆ ಪದೇ ಪದೇ ದೈಹಿಕವಾಗಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಮನೆಗೆ ಬರಬಹುದೆಂಬ ಸುಳಿವು ಸಿಕ್ಕ ಬಳಿಕ ಮನೆ ಮಾಲೀಕರು ಸುಮಾರು 25 ನಿಮಿಷಗಳಿಂದ ಮಂಚದ ಬಾಕ್ಸ್​ನಲ್ಲಿ ಆಕೆಯನ್ನು ಬಚ್ಚಿಟ್ಟಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More