ಮೋದಿ ಭಾವಚಿತ್ರವಿರುವ ಬ್ಯಾನರ್​ ಹಿಡಿದು 13 ಸಾವಿರ ಅಡಿ ಮೇಲಿಂದ ಧುಮುಕಿದ ಯುವಕರು

Edited By:

Updated on: Apr 08, 2024 | 11:14 AM

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರ ಪರವಾಗಿ ಯುವಕರು ವಿಶಿಷ್ಟವಾಗಿ ಪ್ರಚಾರ ಮಾಡಿದ್ದಾರೆ. ನಾಲ್ವರು ಮೋದಿ ಅಭಿಮಾನಿಗಳು ನಮೋ ಬ್ರಿಗೇಡ್​ 2.0 ಎಂದು ಬರೆದಿರುವ ಬ್ಯಾನರ್​ ಹಿಡಿದುಕೊಂಡು ಸ್ಕೈಡೈವಿಂಗ್ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರ (Narendra Modi) ಪರವಾಗಿ ಯುವಕರು ವಿಶಿಷ್ಟವಾಗಿ ಪ್ರಚಾರ ಮಾಡಿದ್ದಾರೆ. ನಾಲ್ವರು ಮೋದಿ ಅಭಿಮಾನಿಗಳು ನಮೋ ಬ್ರಿಗೇಡ್​ 2.O (Namo Brigade 2.O) ಎಂದು ಬರೆದಿರುವ ಬ್ಯಾನರ್​ ಹಿಡಿದುಕೊಂಡು ಸ್ಕೈಡೈವಿಂಗ್ ಮಾಡಿದ್ದಾರೆ. ವಿಜಯಪುರದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ, ಬೆಂಗಳೂರಿನ ರಾಹುಲ ಡಾಕ್ರೆ, ಅನುಭವ ಅಗರವಾಲ್ ಮತ್ತು ಮಹರಾಷ್ಟ್ರದ ಹಿಮಾಂಶು ಸಾಬಳೆ ನಾಲ್ವರು ಬ್ಯಾಂಕಾಕ್​ನ ಖಾವ್ಯಾವ್ ಡ್ರಾಪ್ ಝೋನ್​ನಿಂದ ಮೋದಿ ಭಾವಚಿತ್ರವಿರು ಬಾವುಟ ಹಿಡಿದುಕೊಂಡು 13,000 ಅಡಿ ಎತ್ತರದಿಂದ ಹಾರಿದ್ದಾರೆ. ರಾಜಶೇಖರ್ ಹಾಗೂ ಅವರ ತಂಡ ಸ್ಕೈಡೈವಿಂಗ್ ಮಾಡಿರುವ ವಿಡಿಯೋ ಸಾಮಾಜಿಕ ಜಲತಾಣಲ್ಲಿ ವೈರಲ್ ಆಗಿದೆ.

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೂ ಸ್ಕೈ ಡೈವಿಂಗ್​

ಈ ನಾಲ್ವರು ಯುವಕರು ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೂ ಸ್ಕೈ ಡೈವಿಂಗ್​ ಮಾಡಿದ್ದರು. ಕೈಯ್ಯಲ್ಲಿ ಜೈ ಶ್ರೀರಾಮ ಎಂದು ಬರೆದಿರುವ ಮತ್ತು ರಾಮ ಮಂದಿರದ ಫೋಟೋ ಇರುವ ಬ್ಯಾನರ್ ಹಿಡಿದು ಸ್ಕೈ ಡೈವಿಂಗ್ ಮೂಲಕ 13 ಸಾವಿರ ಅಡಿಯ ಮೇಲಿನಿಂದ ಜೈ ಶ್ರೀ ರಾಮ್ ಎಂದು ಧುಮುಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 08, 2024 11:10 AM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More