AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು?

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು?

Sunil MH
| Edited By: |

Updated on:Feb 25, 2026 | 6:55 PM

Share

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್ರೀಯ ಪಕ್ಷ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಕುಮಾರಸ್ವಾಮಿಯವರು ದೆಹಲಿಯಿಂದ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್​ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಮತ್ತು ಯಾವ ಭಾವನೆ ವ್ಯಕ್ತಪಡಿಸುತ್ತಾರೆ ಎಂಬುದರ ಮೇಲೆ ಜೆಡಿಎಸ್ ತನ್ನ ಮುಂದಿನ ಹೆಜ್ಜೆ ಇಡಲಿದೆ. ಸಂಸತ್ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ಎನ್​ಡಿಎ ಜೊತೆಗೇ ಹೋಗೋದಾಗಿಯೂ ಅವರು ಈ ವೇಳೆ ತಿಳಿಸಿದ್ದಾರೆ.

ಕೇಂದ್ರ ನಾಯಕರೊಂದಿಗೆ ಚರ್ಚಿಸಲು ಹೆಚ್.ಡಿ.ಕುಮಾರಸ್ವಾಮಿಯವರು ದೆಹಲಿಗೆ ತೆರಳಿದ್ದಾರೆ. ಅವರು ವಾಪಸ್ ಬಂದ ನಂತರ ನಿಖಿಲ್ ಕುಮಾರಸ್ವಾಮಿ, ತಿಪ್ಪೇಸ್ವಾಮಿ, ಬಾಬು ಹಾಗೂ ಇತರ ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವೇಗೌಡರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 25, 2026 06:55 PM
Follow Us