ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ರೆ ತಪ್ಪೇನಿದೆ?: ಅಚ್ಚರಿಯ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಭೇಟಿಯ ಅಗತ್ಯವಿಲ್ಲ, ಆದರೆ ಭವಿಷ್ಯದಲ್ಲಿ ಅನಿವಾರ್ಯತೆ ಬಂದರೆ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಹಳೆಯ "ಸ್ಟಿಂಗ್ ಕಾರ್ಯಾಚರಣೆ" ಘಟನೆಯನ್ನು ಪ್ರಸ್ತಾಪಿಸಿ ಡಿಕೆ ಶಿವಕುಮಾರ್ಗೆ ಸವಾಲೆಸೆದಿದ್ದಾರೆ.
ಬೆಂಗಳೂರು, ಅ.23: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಭೇಟಿ ಕುರಿತು ಹಬ್ಬಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ಕುಮಾರಸ್ವಾಮಿ, ಭವಿಷ್ಯದಲ್ಲಿ ಅನಿವಾರ್ಯತೆ ಸೃಷ್ಟಿಯಾದರೆ ಖಂಡಿತಾ ಭೇಟಿ ಮಾಡುವುದಾಗಿ ಹೇಳಿದ್ದಾರೆ. “ನಾವು ಮಾಜಿ ಮುಖ್ಯಮಂತ್ರಿಗಳು. ಎಂತೆಂಥವರನ್ನೂ ಭೇಟಿ ಮಾಡಿದ್ದೇವೆ. ಅವರು ನಮ್ಮ ಪಕ್ಷದಲ್ಲಿದ್ದಂತವರು. ಭೇಟಿ ಮಾಡಿದರೆ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ “ಸ್ಟಿಂಗ್ ಕಾರ್ಯಾಚರಣೆ” ಕುರಿತು ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. 2011ರಲ್ಲಿ ನಡೆದಿದ್ದ ಒಂದು ಘಟನೆಯನ್ನು ಉಲ್ಲೇಖಿಸಿದ ಅವರು, “2011ರಲ್ಲಿ ಸಿದ್ದರಾಮಯ್ಯನವರು ಭೇಟಿ ಮಾಡಿದ್ದನ್ನು ಈಗ 2023ರಲ್ಲಿ ಕ್ಯಾಮರಾ ಇಟ್ಟುಕೊಂಡು ಶೂಟ್ ಮಾಡುತ್ತಾರೆ, ಇದೇನು ಸಿನಿಮಾನಾ?” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು 2024ರ ಪಾರ್ಲಿಮೆಂಟ್ ಚುನಾವಣೆ ಬಳಿಕ ನಡೆದ ಡಿ.ಕೆ. ಶಿವಕುಮಾರ್ ಸಂಬಂಧಿತ ಘಟನೆಯೊಂದಿಗೆ ಹೋಲಿಸಿ, ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸವಾಲೆಸೆದಿದ್ದಾರೆ. “ಕಾಲ ಉತ್ತರ ಕೊಡುತ್ತದೆ” ಎಂಬ ಹೇಳಿಕೆ ಕುರಿತು, “ಸಿದ್ದರಾಮಯ್ಯನವರ ಹೆಸರನ್ನು ಹಾಳುಮಾಡಿ, ಕಾಲ ಉತ್ತರ ಕೊಡುತ್ತದಾ?” ಎಂದು ಪ್ರಶ್ನಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 23, 2026 01:32 PM
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

