ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ

Edited By:

Updated on: May 08, 2026 | 12:52 PM

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಟಿವಿಕೆ ವಿಜಯ್ ಘೋಷಿಸಿರುವ ಉಚಿತ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಪ್ರಶ್ನಿಸಿದ್ದಾರೆ. ತಮಿಳುನಾಡಿನ ಬಜೆಟ್ 3.30 ಲಕ್ಷ ಕೋಟಿ ರೂ. ಇದ್ದು, ವಿಜಯ್ ಯೋಜನೆಗಳಿಗೆ 6-7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ಹಣವನ್ನು ಹೇಗೆ ಹೊಂದಿಸುತ್ತಾರೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ವಿಜಯ್‌ರನ್ನು “ದೇವರೇ ಕಾಪಾಡಬೇಕು” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 08, 2026 12:49 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More