ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರದ ನಂತರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ. ತಮ್ಮ ತಾಯಿ ಸದಾ ಹೃದಯದಲ್ಲಿ ನೆಲೆಸುತ್ತಾರೆ ಎಂದ ಅವರು, ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಕರ್ತವ್ಯ. ಅರಿತೋ ಅರಿಯದೆಯೋ ಮಾಡಿದ ತಪ್ಪುಗಳಿಗೆ ಅವರ ಬಳಿ ಕ್ಷಮೆಯಾಚಿಸಿರೋದಾಗಿ ಅವರು ತಿಳಿಸಿದ್ದಾರೆ.
ಹಾಸನ, ಜುಲೈ 20: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕಿರಿಯ ಮಗ ಹೆಚ್.ಡಿ.ರಮೇಶ್ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು. ತಾಯಿಯ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾವುಕರಾಗಿ ಮಾತನಾಡಿದ್ದು, ತಮ್ಮ ತಾಯಿ ಶಾಶ್ವತವಾಗಿ ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಬದುಕು, ಅವರ ಆದರ್ಶಗಳು ಮತ್ತು ಅವರು ಜೀವನವನ್ನು ನಡೆಸಿದ ರೀತಿ ತಮ್ಮ ಕುಟುಂಬಕ್ಕೆ ಸದಾ ಸ್ಫೂರ್ತಿಯಾಗಿದ್ದು, ಅವರ ಭಾವನೆಗಳನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 20, 2026 07:37 PM
Follow Us
