AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 4 ಸಾವಿರ, ದೆಹಲಿಯಲ್ಲಿ 2.3 ಸಾವಿರ H1N1 ಕೇಸ್: ಶಾಲಾ ಮಕ್ಕಳಿಗೆ ಕಟ್ಟುನಿಟ್ಟಿನ ಗೈಡ್‌ಲೈನ್ಸ್

ಕರ್ನಾಟಕದಲ್ಲಿ 4 ಸಾವಿರ, ದೆಹಲಿಯಲ್ಲಿ 2.3 ಸಾವಿರ H1N1 ಕೇಸ್: ಶಾಲಾ ಮಕ್ಕಳಿಗೆ ಕಟ್ಟುನಿಟ್ಟಿನ ಗೈಡ್‌ಲೈನ್ಸ್

ಅಕ್ಷಯ್​ ಪಲ್ಲಮಜಲು​​
|

Updated on: Aug 25, 2026 | 10:22 PM

Share

ಕರ್ನಾಟಕದಲ್ಲಿ H1N1 ಸೋಂಕಿನ 4,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 2,000 ಕೇಸ್‌ಗಳು ಪತ್ತೆಯಾಗಿವೆ. ದೆಹಲಿಯಲ್ಲೂ 2,308 ಪ್ರಕರಣಗಳು ವರದಿಯಾಗಿವೆ. ಆದಾಗ್ಯೂ, ಆರೋಗ್ಯ ಇಲಾಖೆ ಆತಂಕ ಪಡಬೇಕಾಗಿಲ್ಲ ಎಂದು ತಿಳಿಸಿದೆ. ಸೋಂಕು ತಡೆಗೆ ಶಾಲೆಗಳಿಗೆ ಮಾಸ್ಕ್‌ ಬಳಕೆ, ಕೈ ತೊಳೆಯುವುದು, ಕರವಸ್ತ್ರ ಬಳಕೆ ಸೇರಿದಂತೆ ಎಂಟು ಪ್ರಮುಖ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಬೆಂಗಳೂರು, ಆ.25: ದೇಶದಲ್ಲಿ H1N1 ಸೋಂಕು ಆತಂಕ ಸೃಷ್ಟಿಸುತ್ತಿದೆ. ಕರ್ನಾಟಕದಲ್ಲಿ ಇದುವರೆಗೆ 4,000ಕ್ಕೂ ಹೆಚ್ಚು H1N1 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ ಸುಮಾರು 2,000 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರೂ, ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ, ಯು.ಟಿ. ಖಾದರ್ ಅವರು ಆತಂಕ ಪಡಬೇಕಾಗಿಲ್ಲ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಇದೇ ವೇಳೆ, ದೆಹಲಿಯಲ್ಲೂ H1N1 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 2,308 ಕೇಸ್‌ಗಳು ಪತ್ತೆಯಾಗಿವೆ. ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿಯಲ್ಲಿ ಸಿಎಂ ರೇಖಾ ಅವರು ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ದೆಹಲಿ ಸರ್ಕಾರವು ಶಾಲೆಗಳಿಗೆ ಎಂಟು ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಪ್ರಕಾರ, ಮಕ್ಕಳು ಶಾಲೆಯಲ್ಲಿ ಮಾಸ್ಕ್ ಬಳಸಬೇಕು, ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರ ಉಪಯೋಗಿಸಬೇಕು, ಊಟಕ್ಕೂ ಮುನ್ನ ಸರಿಯಾಗಿ ಕೈ ತೊಳೆಯಬೇಕು. ಉಸಿರಾಟದ ಸಮಸ್ಯೆ ಇರುವ ವ್ಯಕ್ತಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ಶಾಲೆಗಳ ಕೊಠಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ನೀಡದಂತೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More