Kudalasangama Seer Speaks; ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಮೇಲೆ ವಿಶ್ವಾಸ ಹುಟ್ಟಲಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಲಿಂಗಾಯತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಸ್ಪಷ್ಟವಾಗಿ ಘೋಷಿಸದೇ ಹೋಗಿದ್ದು ಮುಳುವಾಯಿತು ಎಂದು ಸ್ವಾಮೀಜಿ ಹೇಳಿದರು
ಬಾಗಲಕೋಟೆ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Polls) ಬಿಜೆಪಿಗೆ ಯಾಕೆ ಸೋಲಾಯಿತು ಅಂತ ವಿಶ್ಲೇಷಣೆ ಮತ್ತು ಚರ್ಚೆಗಳು ಜಾರಿಯಲ್ಲಿವೆ. ಲಿಂಗಾಯತ ಪಂಚಮಸಾಲಿ ಲಿಂಗಾಯತ (Panchamasali Lingayats) ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸುಧೀರ್ಘ ಹೋರಾಟ ನಡೆಸಿ ಸಫಲರಾದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳುವ ಪ್ರಕಾರ, ಚುನಾವಣಾ ಪ್ರಚಾರ ಸಮಯದಲ್ಲಿ ಒಬ್ಬ ಲಿಂಗಾಯತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಬಿಜೆಪಿಯ ವರಿಷ್ಠ ನಾಯಕರು ಸ್ಪಷ್ಟವಾಗಿ ಘೋಷಿಸದೇ ಹೋಗಿದ್ದು ಪಕ್ಷಕ್ಕೆ ಮುಳುವಾಯಿತು. ಅದೇ ಕಾರಣಕ್ಕೆ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯ ಮೇಲೆ ವಿಶ್ವಾಸ ಹುಟ್ಟಲಿಲ್ಲ ಎಂದು ಸ್ವಾಮೀಜಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 17, 2023 11:32 AM
Latest Videos