Kudalasangama Seer Speaks; ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಮೇಲೆ ವಿಶ್ವಾಸ ಹುಟ್ಟಲಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2023 | 11:32 AM

ಲಿಂಗಾಯತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಸ್ಪಷ್ಟವಾಗಿ ಘೋಷಿಸದೇ ಹೋಗಿದ್ದು ಮುಳುವಾಯಿತು ಎಂದು ಸ್ವಾಮೀಜಿ ಹೇಳಿದರು

ಬಾಗಲಕೋಟೆ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Polls) ಬಿಜೆಪಿಗೆ ಯಾಕೆ ಸೋಲಾಯಿತು ಅಂತ ವಿಶ್ಲೇಷಣೆ ಮತ್ತು ಚರ್ಚೆಗಳು ಜಾರಿಯಲ್ಲಿವೆ. ಲಿಂಗಾಯತ ಪಂಚಮಸಾಲಿ ಲಿಂಗಾಯತ (Panchamasali Lingayats) ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸುಧೀರ್ಘ ಹೋರಾಟ ನಡೆಸಿ ಸಫಲರಾದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ  ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳುವ ಪ್ರಕಾರ, ಚುನಾವಣಾ ಪ್ರಚಾರ ಸಮಯದಲ್ಲಿ ಒಬ್ಬ ಲಿಂಗಾಯತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಬಿಜೆಪಿಯ ವರಿಷ್ಠ ನಾಯಕರು ಸ್ಪಷ್ಟವಾಗಿ ಘೋಷಿಸದೇ ಹೋಗಿದ್ದು ಪಕ್ಷಕ್ಕೆ ಮುಳುವಾಯಿತು. ಅದೇ ಕಾರಣಕ್ಕೆ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯ ಮೇಲೆ ವಿಶ್ವಾಸ ಹುಟ್ಟಲಿಲ್ಲ ಎಂದು ಸ್ವಾಮೀಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 17, 2023 11:32 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.