ಮೈಲ್ಡ್ ಸ್ಟ್ರೋಕ್ ಆದ ಕೂಡಲೇ ಕುಮಾರಸ್ವಾಮಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಹೆಚ್ಚಿನ ಅಪಾಯ ಸಂಭವಿಸಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಮೈಲ್ಡ್ ಸ್ಟ್ರೋಕ್ ಆದ ಕೂಡಲೇ ಕುಮಾರಸ್ವಾಮಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಹೆಚ್ಚಿನ ಅಪಾಯ ಸಂಭವಿಸಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2023 | 4:24 PM

ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸದೆ ಹೋಗಿದ್ದರೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅವರನ್ನು ಸರಿಯಾದ ಸಮಯದಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿರುವುದರಿಂದ ಅಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಕ್ಕಿದೆ ಎಂದು ಪರಮೇಶ್ವರ ಹೇಳಿದರು. ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ತನ್ನೊಂದಿಗೆ ಮಾತಾಡಿದರು, ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಅನಾರೋಗ್ಯ ಚೇತರಿಸಿಕೊಳ್ಳುತ್ತಿರುವ ಜೆಡಿಎಸ್ ಧುರೀಣ ಹೆಚ್ ಡಿ ಕುಮಾರಸ್ವಾಮಿ (JHD Kumaraswamy) ಆರೋಗ್ಯ ವಿಚಾರಿಸಲು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಇಂದು ಜಯನಗರದ ಅಪೊಲ್ಲೋ ಆಸ್ಪತ್ರೆಗೆ ಆಗಮಿಸಿದ್ದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ, ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ, ಅವರ ಅದೃಷ್ಟ ಚೆನ್ನಾಗಿತ್ತು ಅಂತಲೇ ಹೇಳಬೇಕು, ಯಾಕೆಂದರೆ 4 ದಿನಗಳ ಹಿಂದೆ ಅವರಿಗೆ ಮೈಲ್ಡ್ ಸ್ಟ್ರೋಕ್ (mild stroke) ಅಗಿತ್ತು ಎಂದು ಹೇಳಿದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸದೆ ಹೋಗಿದ್ದರೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅವರನ್ನು ಸರಿಯಾದ ಸಮಯದಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿರುವುದರಿಂದ ಅಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಕ್ಕಿದೆ ಎಂದು ಪರಮೇಶ್ವರ ಹೇಳಿದರು. ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ತನ್ನೊಂದಿಗೆ ಮಾತಾಡಿದರು, ನಾಳೆ ಸಾಯಂಕಾಲ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಗೃಹ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ