ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯ ಈ ಸಮಯದಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಭರ್ಜರಿ ಆಲಿಕಲ್ಲು ಮಳೆ ಸುರಿದಿದೆ. ಜತೆಗೆ, ಬಿರುಗಾಳಿಗೆ ಭಾರಿ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎಲ್‌ಪಿಜಿ ಕೊರತೆ ಹಿನ್ನೆಲೆ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಜನ ಮರದ ತುಂಡುಗಳನ್ನು ಒಯ್ಯಲು ಮುಗಿಬಿದ್ದರು.
ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ ಕೊಂಬೆಗಳನ್ನು ಕತ್ತರಿಸಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು.
ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮರವನ್ನು ಸಂಪೂರ್ಣವಾಗಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Follow Us
