ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌: ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ

Edited By:

Updated on: Nov 16, 2026 | 3:36 PM

ಕರ್ನಾಟಕದಲ್ಲಿ ಅರ್ಧ ಹೆಲ್ಮೆಟ್‌ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯುವ ಜತೆಗೆ ಅವುಗಳ ತಯಾರಿಕಾ ಕೇಂದ್ರಗಳನ್ನೂ ಬಂದ್ ಮಾಡಲು ಸಿದ್ಧತೆ ನಡೆಸಿದೆ. ಈ ಸಂಬಂಧ ಅಧಿಕೃತ ಆದೇಶ ಬಗ್ಗೆ ಚಿಂತನೆಗಳು ನಡೆದಿದ್ದು, ಮುಂದಿನ ವರ್ಷ ಅಂದ್ರೆ 2027, ಜನವರಿ 1ರಿಂದ ಹಾಫ್ ಹೆಲ್ಮೆಟ್‌ ಬ್ಯಾನ್ ಜಾರಿಗೆ ಬರುವ ಸಾಧ್ಯತೆಗಳಿವೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು, (ನವೆಂಬರ್ 16): ಕರ್ನಾಟಕದಲ್ಲಿ ಅರ್ಧ ಹೆಲ್ಮೆಟ್‌ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯುವ ಜತೆಗೆ ಅವುಗಳ ತಯಾರಿಕಾ ಕೇಂದ್ರಗಳನ್ನೂ ಬಂದ್ ಮಾಡಲು ಸಿದ್ಧತೆ ನಡೆಸಿದೆ. ಈ ಸಂಬಂಧ ಅಧಿಕೃತ ಆದೇಶ ಬಗ್ಗೆ ಚಿಂತನೆಗಳು ನಡೆದಿದ್ದು, ಮುಂದಿನ ವರ್ಷ ಅಂದ್ರೆ 2027, ಜನವರಿ 1ರಿಂದ ಹಾಫ್ ಹೆಲ್ಮೆಟ್‌ ಬ್ಯಾನ್ ಜಾರಿಗೆ ಬರುವ ಸಾಧ್ಯತೆಗಳಿವೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ. ಹೌದು…ಬೆಂಗಳೂರಿನಲ್ಲಿ ಇಂದು (ನವೆಂಬರ್ 16) ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್, ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಅನ್ನು ಬಳಸುವಂತಿಲ್ಲ. ಈ ಅಸುರಕ್ಷಿತ ಅರ್ಧ ಹೆಲ್ಮೆಟ್ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More