Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ತನ್ನ ಕಾರು ತೊಳಸಿದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಅವಧಿಯಲ್ಲೇ ಮಕ್ಕಳು ಕಾರು ತೊಳೆಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಇಂತಹ ಘಟನೆಗಳಿದ್ದ ಬಗ್ಗೆ ದೂರುಗಳಿದ್ದವು. ಶಿಕ್ಷಣ ಇಲಾಖೆ ಘಟನೆ ಬಗ್ಗೆ ವರದಿ ನೀಡುವಂತೆ ಸೂಚಿಸಿದೆ.
ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಹಳಿಯಾಳ ಬಿಇಒ ಪ್ರಮೋದ ಮಹಾಲೆ ಈ ವಿಷಯದ ಬಗ್ಗೆ ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 30, 2025 02:50 PM