AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಅನಾಮಧೇಯ ದಂಪತಿಯಿಂದ ಅಂಗಡಿಗೆ ವಾಮಾಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಉತ್ತರ ಕನ್ನಡ: ಅನಾಮಧೇಯ ದಂಪತಿಯಿಂದ ಅಂಗಡಿಗೆ ವಾಮಾಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Feb 01, 2024 | 3:58 PM

Share

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (Haliyala)ದಲ್ಲಿ ರಾತ್ರಿ ಸ್ಕೋಟರ್​ನಲ್ಲಿ ಬಂದ ಅನಾಮಧೇಯ ದಂಪತಿ ಅಂಗಡಿಯೊಂದಕ್ಕೆ ವಾಮಾಚಾರ ಮಾಡಿದ ಘಟನೆ ನಡೆದಿದೆ. ಜೊತೆಗೆ ಮಳಿಗೆ ಮುಂದೆ ಮಂತ್ರಿಸಿದ ನಿಂಬೆಹಣ್ಣನ್ನು ಎಸೆದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆಧರಿಸಿದ ಅಂಗಡಿ ಮಾಲೀಕ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಉತ್ತರ ಕನ್ನಡ, ಫೆ.01: ಅನಾಮಧೇಯ ದಂಪತಿಯಿಂದ ಅಂಗಡಿಗೆ ವಾಮಾಚಾರಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (Haliyala)ದಲ್ಲಿ ನಡೆದಿದೆ. ಈ ಹಿನ್ನಲೆ ಅಂಗಡಿ ಮಾಲೀಕ ಪೊಲೀಸ್​ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಹಳಿಯಾಳ ನಗರದ ಕುಂಬಾಗಲ್ಲಿಯ ಬಸವರಾಜ್ ಎಂಬುವವರ ಅಂಗಡಿಗೆ ರಾತ್ರಿ ವೇಳೆ ಸ್ಕೂಟಿಯಲ್ಲಿ ಬಂದ ಅನಾಮದೇಯ ದಂಪತಿ, ನಿಂಬೆ ಹಣ್ಣಿಗೆ ಮೊಳೆ ಹೊಡೆದು ಕೆಂಪುದಾರ ಸುತ್ತಿ ಎಸೆದು ಹೋಗಿದ್ದಾರೆ. ಮಳಿಗೆ ಮುಂದೆ ಮಂತ್ರಿಸಿದ ನಿಂಬೆಹಣ್ಣನ್ನು ಎಸೆದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನ ಆಧರಸಿ ಅಂಗಡಿ ಮಾಲೀಕ ಹಳಿಯಾಳ ಠಾಣೆಗೆ ದೂರು ನೀಡಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್‌ ಅವರು ರಜೆ ಮೇಲೆ ತೆರಳಿದ್ದರು. ಶುಕ್ರವಾರ ವಾಪಸ್ ಆಗಮಿಸಿದಾಗ ಚೇಂಬರ್‌ನ ಕೀಲಿ ತೆಗೆದಾಗ ವಾಮಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕುಲಪತಿಗೆ ದೂರು ನೀಡಲಾಗಿತ್ತು. ಇದೀಗ ಹಳಿಯಾಳದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 01, 2024 03:34 PM
Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More