ಮೈಸೂರು, (ಅಕ್ಟೋಬರ್ 05): ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹಂಪಾಪುರದ ಇಂದಿರಾಗಾಂಧಿ ವ ವಸತಿ ಶಾಲೆಯ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಸುಖಾಸುಮ್ಮನೆ ಹಲ್ಲೆ, ಸಹ ಶಿಕ್ಷಕರಿಗೆ ಕಿರುಕುಳ ಹಾಗೂ ಸೂಕ್ತ ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಳಿದಿದ್ದಾರೆ. ಇನ್ನು ಮಕ್ಕಳ ಪ್ರತಿಭಟನೆಗೆ ಪೋಷಕರು ಸಾಥ್ ನೀಡಿದ್ದು, ಪ್ರಾಂಶುಪಾಲೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಒಂದು ವೇಳೆ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ