ಬೆಂಗಳೂರಿನಲ್ಲಿ ಜಲಮಂಡಳಿ ಅಧಿಕಾರಿಗಳ ಯಡವಟ್ಟು: ವಿಜಯನಗರದ ಹಂಪಿ ನಗರದಲ್ಲಿ ಕಾವೇರಿ ನೀರಿಗೆ ಸೇರಿತು ಕೊಳಚೆ ನೀರು

ಬೆಂಗಳೂರಿನಲ್ಲಿ ಜಲಮಂಡಳಿ ಅಧಿಕಾರಿಗಳ ಯಡವಟ್ಟು: ವಿಜಯನಗರದ ಹಂಪಿ ನಗರದಲ್ಲಿ ಕಾವೇರಿ ನೀರಿಗೆ ಸೇರಿತು ಕೊಳಚೆ ನೀರು

Updated on: Nov 27, 2026 | 5:08 PM

ಬೆಂಗಳೂರಿನ ಹಂಪಿ ನಗರದ ಕವಿತಾ ಲೇಔಟ್‌ನಲ್ಲಿ ಕಾವೇರಿ ನೀರಿನೊಂದಿಗೆ ಕೊಳಚೆ ನೀರು ಮಿಶ್ರಣವಾಗಿದ್ದು, ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡಬ್ಲ್ಯೂಎಸ್‌ಎಸ್‌ಬಿ ಪೈಪ್‌ಲೈನ್ ಅಳವಡಿಕೆ ಕಾರ್ಯದ ವೇಳೆ ಆದ ಎಡವಟ್ಟಿನಿಂದ ಕಳೆದ ಕೆಲವು ದಿನಗಳಿಂದ ಕಲುಷಿತ ನೀರು ಬರುತ್ತಿದೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ನ.27: ವಿಜಯನಗರ ವಿಧಾನಸಭಾ ಕ್ಷೇತ್ರದ ಹಂಪಿ ನಗರದ ವಾರ್ಡ್ ನಂಬರ್ 143ರ ಕವಿತಾ ಲೇಔಟ್‌ನಲ್ಲಿ ಕಾವೇರಿ ನೀರಿನೊಂದಿಗೆ ಕೊಳಚೆ ನೀರು ಮಿಶ್ರಣವಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಬೆಂಗಳೂರು ಜಲಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಆಪಾದಿಸಲಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದಲೇ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಕುಡಿಯುವ ನೀರಿನ ಪೈಪ್‌ಲೈನ್‌ಗೆ ಕೊಳಚೆ ನೀರು ಸೇರಿಕೊಂಡಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಒಳಚರಂಡಿ ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದ್ದಾಗ ಈ ಎಡವಟ್ಟು ಸಂಭವಿಸಿದೆ ಎನ್ನಲಾಗಿದೆ. ಕಲುಷಿತ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ತೀವ್ರ ದುರ್ವಾಸನೆ ಬೀರುತ್ತಿದೆ. ನಿವಾಸಿಗಳು ಸ್ವಂತ ಖರ್ಚಿನಲ್ಲಿ ಮನೆಯ ಸಂಪನ್ನ ಮತ್ತು ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಶುಚಿಗೊಳಿಸುತ್ತಿದ್ದರೂ, ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಲುಷಿತ ನೀರು ಕುಡಿದು ಸಾಂಕ್ರಾಮಿಕ ರೋಗಗಳಿಗೆ ಒಳಗಾಗುವ ಭೀತಿ ಜನರನ್ನು ಕಾಡುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಶುದ್ಧ ಕುಡಿಯುವ ನೀರು ಒದಗಿಸುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More