ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್
ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸರ್ಕಾರಿ ಶಾಲಾ ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ 60ಕ್ಕೂ ಹೆಚ್ಚು ಪುಟಾಣಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹೆಲಿ-ರೈಡ್ ಮಾಡಿಸಿದ್ದಾರೆ. ಮಕ್ಕಳ ಜೀವನದ ಕನಸು ನನಸಾಗಿಸಿದ ಸಚಿವರ ಈ ನಡೆ, ಉತ್ಸವದ ಆಕರ್ಷಣೆಗೆ ಮತ್ತಷ್ಟು ಮೆರುಗು ನೀಡಿತು. ಇದು ಮಕ್ಕಳಿಗೆ ಸ್ಮರಣೀಯ ಅನುಭವವಾಗಿದೆ.
ಬಳ್ಳಾರಿ, ಫೆ.14: ವಿಶ್ವವಿಖ್ಯಾತ ಹಂಪಿ ಉತ್ಸವವು ಈ ಬಾರಿ ಸರ್ಕಾರಿ ಶಾಲಾ ಮಕ್ಕಳ ಪಾಲಿಗೆ ಅವಿಸ್ಮರಣೀಯ ಕ್ಷಣವಾಗಿದೆ. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಪುಟಾಣಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಕಾಶದಲ್ಲಿ ಹಾರಾಡುವ ಅವಕಾಶ ಮಾಡಿಕೊಡುವ ಮೂಲಕ ದೊಡ್ಡ ‘ಸರ್ಪ್ರೈಸ್’ ನೀಡಿದ್ದಾರೆ. ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಬಂದಿದ್ದರು.ಈ ವೇಳೆ ಸ್ಥಳದಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ಮಕ್ಕಳ ಬಳಿ ತೆರಳಿ ಮಾತುಕತೆ ನಡೆಸಿದರು. “ನಿಮಗೂ ಹೆಲಿಕಾಪ್ಟರ್ ಹತ್ತಬೇಕಾ?” ಎಂದು ಸಚಿವರು ಕೇಳಿದ ತಕ್ಷಣ, ಮಕ್ಕಳು ಸಂಭ್ರಮದಿಂದ “ಹೌದು ಸರ್” ಎಂದು ಕೂಗಿದರು. ಮಕ್ಕಳ ಆಸೆಯನ್ನು ಕಂಡ ಸಚಿವರು ವಿಳಂಬ ಮಾಡದೆ, ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು 60ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೀವನದಲ್ಲಿ ಒಮ್ಮೆಯಾದರೂ ವಿಮಾನ ಅಥವಾ ಹೆಲಿಕಾಪ್ಟರ್ ಏರಬೇಕು ಎಂಬ ಕನಸು ಹೊತ್ತಿದ್ದ ಬಡ ಕುಟುಂಬದ ಮಕ್ಕಳು ಆಕಾಶಕ್ಕೆ ಹಾರುತ್ತಿದ್ದಂತೆ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 14, 2026 04:57 PM
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
