ಫೆ.02 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ; ಸಿದ್ದತೆಯ ವಿಡಿಯೋ ಇಲ್ಲಿದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 01, 2024 | 8:35 PM

ಹಂಪಿ ಉತ್ಸವಕ್ಕೆ ಸರ್ಕಾರ 14 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿಯೇ ಕಾರ್ಯಕ್ರಮದಲ್ಲಿ ಯಾವುದೇ ಚ್ಯುತಿ ಬಾರದಂತೆ ಕಾರ್ಯಕ್ರಮಕ್ಕೆ  ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಬೃಹತ್​​ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ.

ವಿಜಯನಗರ, ಫೆ.01: ನಾಳೆಯಿಂದ(ಫೆ.02) ಮೂರು ದಿನಗಳ ಕಾಲ ಹಂಪಿ ಉತ್ಸವ(Hampi Utsava) ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆ ಹಂಪಿ ಉತ್ಸವದ ಅಂತಿಮ ಹಂತದ ಸಿದ್ಧತೆಯನ್ನು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿಎಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವೇದಿಕೆಯ ನಿರ್ಮಾಣ ಮಾಡುತ್ತಿರುವ ಕಲಾವಿದ ಅರುಣ್ ಸಾಗರ್ ಅವರಿಂದ ಮಾಹಿತಿ ಪಡೆದ ಡಿಸಿ, ಎಸ್ಪಿ. ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ ರಾಜ್ಯದ ನಾನಾ ಕಲಾ ತಂಡಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ

ಇನ್ನು ನಾಳೆ ಸಂಜೆ ಏಳು ಘಂಟೆಗೆ ಅಧಿಕೃತವಾಗಿ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಇನ್ನು ಹಂಪಿ ಉತ್ಸವಕ್ಕೆ ಸರ್ಕಾರ 14 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿಯೇ ಕಾರ್ಯಕ್ರಮದಲ್ಲಿ ಯಾವುದೇ ಚ್ಯುತಿ ಬಾರದಂತೆ ಕಾರ್ಯಕ್ರಮಕ್ಕೆ  ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಜಿಲ್ಲೆಯ 137 ಗ್ರಾಮ ಪಂಚಾಯತಿಗಳಿಂದ ಉಚಿತವಾಗಿ ಬಸ್​ ಮೂಲಕ ಜನರನ್ನು ಕರೆತರುವ ವ್ಯವಸ್ಥೆ ಕೂಡ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ