ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತವಾಗಿ ಆರ್ಭಟಿಸಿದ ಲಕ್ಷ್ಮೀ ಆನೆ

Edited By:

Updated on: May 27, 2026 | 7:41 PM

ಹಂಪಿಯ ವಿರುಪಾಕ್ಷೇಶ್ವರ ದೇವಾಲಯದ ಲಕ್ಷ್ಮೀ ಆನೆಯನ್ನು ಅನಾರೋಗ್ಯ ಹಿನ್ನೆಲೆ ಕೋಲಾರದ ನರಸಾಪುರ ಬಳಿಯ ರಾಜ್ಯದ ಏಕೈಕ ಆನೆ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳುವಾಗ ಆನೆ ಕೊಂಚ ವಿಚಲಿತವಾಗಿ ಆರ್ಭಟಿಸಿದೆ. ಆನೆ ಸ್ಥಳಾಂತರಕ್ಕೆ ಭಕ್ತರು ಪ್ರತಿಭಟನೆ ನಡೆಸಿದ್ದು, ಮೂರು ತಿಂಗಳ ಚಿಕಿತ್ಸೆ ನಂತರ ಲಕ್ಷ್ಮೀ ಆನೆಯನ್ನು ವಾಪಸ್ ತರುವ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಲಾಯಿತು.

ಕೋಲಾರ, ಮೇ 27: ಅನಾರೋಗ್ಯ ಹಿನ್ನೆಲೆ ವಿಜಯನಗರ ಜಿಲ್ಲೆಯ ಹಂಪಿಯ ವಿರುಪಾಕ್ಷೇಶ್ವರ ದೇವಾಲಯದಿಂದ ಸ್ಥಳಾಂತರಿಸಲಾಗಿರುವ ಲಕ್ಷ್ಮೀ ಆನೆ, ಕೋಲಾರ ತಾಲ್ಲೂಕು ನರಸಾಪುರ ಬಳಿಯ ಆನೆ ಪುನರ್ವಸತಿ ಕೇಂದ್ರಕ್ಕೆ ಆಗಮಿಸಿದ ಕೂಡಲೇ ಸ್ವಲ್ಪ ವಿಚಲಿತಗೊಂಡು ಆರ್ಭಟಿಸಿದೆ. ಅರಣ್ಯ ಇಲಾಖೆಯಿಂದ ನಿರ್ಮಾಣವಾಗಿರುವ ರಾಜ್ಯದ ಏಕೈಕ ಆನೆ ಪುನರ್ವಸತಿ ಕೇಂದ್ರಕ್ಕೆ ಲಕ್ಷ್ಮೀ ಆನೆಯನ್ನು ಬುಧವಾರ ಸ್ಥಳಾಂತರಿಸಲಾಗಿತ್ತು. ಹೊಸ ಜಾಗಕ್ಕೆ ಬಂದಿರುವ ಕಾರಣಕ್ಕೆ ಲಕ್ಷ್ಮೀ ಆನೆ ಕೊಂಚ ವಿಚಲಿತಗೊಂಡು ಆರ್ಭಟಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀ ಆನೆಯನ್ನು ಹಂಪಿಯಿಂದ ಸ್ಥಳಾಂತರಿಸುವ ನಿರ್ಧಾರಕ್ಕೆ ನಿನ್ನೆ ದೇವಾಲಯದ ಭಕ್ತರು ಪ್ರತಿಭಟನೆ ನಡೆಸಿದ್ದರು. ಮೂರು ತಿಂಗಳ ಚಿಕಿತ್ಸೆ ಬಳಿಕ ವಾಪಸ್ ಕರೆತಂದು ಬಿಡುವ ಭರವಸೆ ನೀಡಿದ ಬಳಿಕ ಭಕ್ತರು ಪ್ರತಿಭಟನೆ ಕೈಬಿಟ್ಟಿದ್ದರು. ಸದ್ಯ ಪುನರ್ವಸತಿ ಕೇಂದ್ರದಲ್ಲಿ ಲಕ್ಷ್ಮೀ ಆನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಆನೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More