‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

Updated on: Oct 09, 2024 | 8:19 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 16 ಸ್ಪರ್ಧಿಗಳ ಮಧ್ಯೆ ಆಟ ಮುಂದುವರಿದಿದೆ. ಕಳೆದ ವಾರ ಯಮುನಾ ಶ್ರೀನಿಧಿ ಎಲಿಮಿನೇಟ್ ಆಗಿದ್ದಾರೆ. ಇದಾದ ಬಳಿಕ ಸ್ಪರ್ಧಿಗಳಿಗೆ ಎಲಿಮಿನೇಷನ್ ಬಗ್ಗೆ ಹೆಚ್ಚು ಆತಂಕ ವ್ಯಕ್ತವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಹಂಸ ಅವರು ನಡೆದುಕೊಳ್ಳುತ್ತಿರುವ ರೀತಿ ಜೈಲು ನಿವಾಸಿಗಳಿಗೆ ಇಷ್ಟ ಆಗುತ್ತಿಲ್ಲ.

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಹಂಸ ಅವರು ನಡೆದುಕೊಳ್ಳುತ್ತಿರುವ ರೀತಿ ಜೈಲು ನಿವಾಸಿಗಳಿಗೆ ಇಷ್ಟ ಆಗುತ್ತಿಲ್ಲ. ಅವರ ವಿರುದ್ಧ ಎಲ್ಲರೂ ಹರಿಹಾಯುತ್ತಿದ್ದಾರೆ. ಇದು ಸರಿ ಅಲ್ಲ ಎಂಬ ಅಭಿಪ್ರಾಯ ಕೆಲವರಿಗೆ ಬಂದಿದೆ. ಈಗ ಟಾಸ್ಕ್​ ವೇಳೆ ಮೋಸ ಆಗಿದೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ‘ಅವರ ಜೊತೆ ಊಟ ಮಾಡೋದಿದ್ದರೆ ಮನೆಗೆ ಹೋಗಿ ಊಟ ಮಾಡಿ’ ಎಂದು ಜಗದೀಶ್ ಸಿಟ್ಟಾಗಿದ್ದಾರೆ. ಇತ್ತ, ‘ನೀವು ಯಾವ ಸೀಮೆ ಕ್ಯಾಪ್ಟನ್’ ಎಂದು ಚೈತ್ರಾ ಕುಂದಾಪುರ ರೋಷ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More