Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ
Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು.
ಮೈಸೂರು, (ಅಕ್ಟೋಬರ್ 15): ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು. ಇದರೊಂದಿಗೆ ಅಧಿಕೃತವಾಗಿ ಮೈಸೂರು ದಸರಾಗೆ ಚಾಲನೆ ದೊರೆತಿದೆ. ಇನ್ನು ಈ ಉದ್ಘಾಟನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ H.C.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ. ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ. ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.
Published On - 10:35 am, Sun, 15 October 23