Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 15, 2023 | 10:47 AM

Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು.

ಮೈಸೂರು, (ಅಕ್ಟೋಬರ್ 15): ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು. ಇದರೊಂದಿಗೆ ಅಧಿಕೃತವಾಗಿ ಮೈಸೂರು ದಸರಾಗೆ ಚಾಲನೆ ದೊರೆತಿದೆ. ಇನ್ನು ಈ ಉದ್ಘಾಟನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ H​.C.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ. ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ. ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್​ ಉಪಸ್ಥಿತರಿದ್ದರು.

Published On - 10:35 am, Sun, 15 October 23