ಅಂಜನಾದ್ರಿಯಲ್ಲಿ ಸಂಭ್ರಮದ ಹನುಮ ಜಯಂತಿ: ಹರಿದುಬಂದ ಭಕ್ತಸಾಗರ
ಹನುಮ ಜಯಂತಿ ಹಿನ್ನಲೆಯಲ್ಲಿ, ಆಂಜನೇಯನ ಜನ್ಮಸ್ಥಳ ಅಂಜನಾದ್ರಿಯಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಆಂಜನೇಯ ಮೂರ್ತಿಗೆ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತಿಭಾವದಿಂದ ಆಂಜನೇಯನ ದರ್ಶನ ಪಡೆದರು.
ಕೊಪ್ಪಳ, ಏಪ್ರಿಲ್ 2: ಹನುಮ ಜಯಂತಿ ಹಬ್ಬದ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ಆಂಜನೇಯನ ಜನ್ಮಸ್ಥಳವಾದ ಈ ಪುಣ್ಯಕ್ಷೇತ್ರದಲ್ಲಿ ಹನುಮ ಜಯಂತಿಯ ಪ್ರಯುಕ್ತ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಕೇಸರಿ ವರ್ಣಮಯವಾಗಿ ಶೃಂಗಾರಗೊಂಡಿದ್ದ ಆಂಜನೇಯನ ಮೂರ್ತಿಯು ಭಕ್ತರ ಗಮನ ಸೆಳೆಯಿತು. ಹನುಮ ಜಯಂತಿ ಹಿನ್ನಲೆಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಮತ್ತು ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
Follow Us
Latest Videos
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ

