ಶಾಲೆಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ದಂಡ? ಹಿಂದೂ ಸಂಘಟನೆ ಮಾಡಿದ್ದೇನು ನೋಡಿ?

Updated on: Feb 25, 2026 | 12:16 PM

ಕಚ್‌ನ ಮುದ್ರಾ ಸೇಂಟ್ ಕ್ಸೇವಿಯರ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಶಾಲಾ ನಿಯಮ ಉಲ್ಲಂಘನೆ ಎಂದು ದಂಡ ವಿಧಿಸಿದ (ಶಾಲೆಯ ಪ್ರಕಾರ ಎಚ್ಚರಿಕೆ) ಕಾರಣ ಪೋಷಕರು ಮತ್ತು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ಶಾಲಾ ಆಡಳಿತವು ಧಾರ್ಮಿಕ ಪುಸ್ತಕಗಳನ್ನು ತರುವುದು ನಿಯಮಬಾಹಿರ ಎಂದಿದ್ದು, ಈ ಘಟನೆ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಗುಜರಾತ್‌, ಫೆ.25: ಕಚ್ ಜಿಲ್ಲೆಯ ಮುದ್ರಾ ಪಟ್ಟಣದಲ್ಲಿರುವ ಸೇಂಟ್ ಕ್ಸೇವಿಯರ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹನುಮಾನ್ ಚಾಲೀಸಾ ಪುಸ್ತಕವನ್ನು ತಂದಿದ್ದಳು. ಶಾಲೆಯ ವಿರಾಮದ ಸಮಯದಲ್ಲಿ (Break time) ಆಕೆ ತನ್ನ ಸ್ನೇಹಿತರೊಂದಿಗೆ ಚಾಲೀಸಾ ಪಠಿಸುತ್ತಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿ ಚಾಲೀಸಾ ಪಠಿಸುತ್ತಿರುವುದನ್ನು ಗಮನಿಸಿದ ಶಾಲಾ ಶಿಕ್ಷಕರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ಈ ಬಗ್ಗೆ ಹೇಳಿದ್ದಾರೆ. ವಿದ್ಯಾರ್ಥಿನಿಗೆ ದಂಡವನ್ನು ಕೂಡ ಹಾಕಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ವಿದ್ಯಾರ್ಥಿನಿಯ ಪೋಷಕರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. “ಶಾಲೆಯಲ್ಲಿ ಧಾರ್ಮಿಕ ಪುಸ್ತಕಗಳನ್ನು ಓದುವುದು ಅಪರಾಧವೇ?” ಎಂದು ಪ್ರಶ್ನಿಸಿದರು. ಶಾಲೆಯಲ್ಲಿ ಯಾವುದೇ ಧಾರ್ಮಿಕ ಪುಸ್ತಕಗಳನ್ನು ತರುವುದು ನಿಯಮಬಾಹಿರ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಆದರೆ, ವಿದ್ಯಾರ್ಥಿನಿಗೆ ಯಾವುದೇ ದಂಡ ವಿಧಿಸಿಲ್ಲ, ಕೇವಲ ಶಿಸ್ತಿನ ಕ್ರಮವಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಶಾಲಾ ಮಂಡಳಿ ವಾದಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More