‘ಬಿಗ್ ಬಾಸ್​ನಿಂದ 50 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ’: ವೇದಿಕೆಯಲ್ಲೇ ಹೇಳಿದ ಹನುಮಂತ

Updated on: Feb 09, 2025 | 10:50 AM

ಸಿಂಗರ್ ಹನುಮಂತ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅದಕ್ಕೆಲ್ಲ ಕಾರಣ ಆಗಿದ್ದು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ. ಈ ಶೋ ವಿನ್ನರ್ ಆದ ಬಳಿಕ ಅವರು ಅನೇಕ ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಹಾವೇರಿಯಲ್ಲಿ ಕೂಡ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಹನುಮಂತ ಅವರು ಬಿಗ್ ಬಾಸ್ ಶೋನಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಟ್ರೋಫಿ ಗೆದ್ದ ಬಳಿಕ ಅವರು ಹಾವೇರಿಯಲ್ಲಿ ಜನರ ಎದುರು ಮಾತನಾಡಿದ್ದಾರೆ. 50 ಲಕ್ಷ ರೂಪಾಯಿ ಬಹುಮಾನದ ಹಣ ಏನು ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ‘ಇನ್ನೂ 50 ಲಕ್ಷ ರೂಪಾಯಿ ಬಂದಿಲ್ಲ. ಅದು ಬರಬೇಕು ಎಂದರೆ ಇನ್ನೂ ಸ್ವಲ್ಪ ಲೇಟ್ ಆಗುತ್ತದೆ. ಬಂದಾಗ ನಿಮಗೆ ಹೇಳುತ್ತೇನೆ’ ಎಂದಿದ್ದಾರೆ ಹನುಮಂತ. ಇದೇ ವೇದಿಕೆಯಲ್ಲಿ ಅವರು ದೋಸ್ತಾ ಧನರಾಜ್ ಬಗ್ಗೆಯೂ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More