ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

Updated on: Jan 03, 2025 | 7:02 PM

‘ಹನುಮಂತ ಮದುವೆಯಾದರೆ ನಿಮ್ಮ ಸೊಸೆ ಇದೇ ರೀತಿ ಬಟ್ಟೆ ಹಾಕಬೇಕಾ’ ಎಂದು ರಜತ್ ಅವರು ಪ್ರಶ್ನೆ ಮಾಡಿದ್ದಾರೆ. ‘ಹೌದು, ಅದಕ್ಕೆ ನಾನು ನಾಲ್ಕು ಜೊತೆ ಬಟ್ಟೆ ಹೊಲೆದಿದ್ದೇನೆ. ಅದು ರೂಢಿ ಆಗುತ್ತದೆ. ಇವತ್ತು ಭಾರ ಎನಿಸುತ್ತದೆ. ಆದರೆ ನಾಳೆ ಹಗುರ ಎನಿಸುತ್ತದೆ. ನಮ್ಮದು ಹೆಣ್ಣು ದೇವತೆ ಮನೆ. ಬೇರೆ ಬಟ್ಟೆ ನಡೆಯಲ್ಲ’ ಎಂದು ಹನುಮಂತನ ತಾಯಿ ಹೇಳಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಹನುಮಂತ ಅವರ ತಂದೆ-ತಾಯಿ ಅತಿಥಿಯಾಗಿ ಬಂದಿದ್ದಾರೆ. ಮಗನ ಮದುವೆ ಬಗ್ಗೆಯೂ ಅವರು ಮಾತನಾಡಿದ್ದಾರೆ. ತಮ್ಮ ಮನೆಯ ಸೊಸೆ ಆಗುವವಳು ಯಾವ ರೀತಿ ಇರಬೇಕು ಎಂಬುದನ್ನು ಅಮ್ಮ ಹೇಳಿದ್ದಾರೆ. ತಮ್ಮ ರೀತಿಯೇ ಬಟ್ಟೆ ಧರಿಸಬೇಕು ಎಂದು ಅವರು ಷರತ್ತು ಹಾಕಿದ್ದಾರೆ. ಜನವರಿ 3ರ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More