‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ

Updated on: Jan 26, 2025 | 4:26 PM

ಬಿಗ್ ಬಾಸ್ ಫಿನಾಲೆಯ ಎರಡನೇ ದಿನ ಆರಂಭ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದಕ್ಕೆ ಸಂಬಂಧಿಸಿದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಹನುಮಂತ ಅವರ ಫನ್ ಟಾಕ್ ಎಲ್ಲರಿಗೂ ಇಷ್ಟ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ಬಿಡುಗಡೆ ಆಗಿದೆ. ಈ ಪ್ರೋಮೋದಲ್ಲಿ ಹನುಮಂತ ಜೊತೆ ಸುದೀಪ್ ಅವರು ಮಾತನಾಡಿರೋದು ಇದೆ. ಸುದೀಪ್ ಅವರು ನಾನಾ ರೀತಿಯಲ್ಲಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ಹನುಮಂತ ಕಡೆಯಿಂದ ಫನ್ ಆದ ಉತ್ತರ ಬಂದಿದೆ. ‘ರಜತ್ ಅಂತ ಮಗ ಇರಬಾರದು ಜಗಳ ಮಾಡಾಕ’ ಎಂದು ಹನುಮಂತ ಹೇಳಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 26, 2025 04:25 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More