ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಕ್ತವಾಗಿ ಕೊಂಡಾಡಿದ ಹನೂರು ಜೆಡಿಎಸ್ ಶಾಸಕ ಮಂಜುನಾಥ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 07, 2024 | 4:56 PM

ಸ್ಥಳೀಯರಾಗಿರುವ ಮರಿಸ್ವಾಮಿ ಅವರ ನೇತೃತ್ವದಲ್ಲಿ ಸತ್ತೇಗಾಲ ಸರ್ಕಾರೀ ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಶಾಲೆಯನ್ನು ನವೀಕರಿಸಿದ್ದಾರೆ. ಪ್ರತಿ ಊರಿಗೊಬ್ಬ ಮರಿಸ್ವಾಮಿ ಸಿಕ್ಕರೆ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಪ್ರಗತಿಯಾಗಲಿದೆ ಎಂದು ಮಂಜುನಾಥ ಹೇಳಿದರು.

ಚಾಮರಾಜನಗರ: ಜಿಲ್ಲೆಯ ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ ಅವರಿಗೆ ಪಕ್ಷದ ವರಿಷ್ಠರು ಶೋಕಾಸ್ ನೋಟೀಸ್ ಜಾರಿಮಾಡಿದರೆ ಆಶ್ಚರ್ಯವಿಲ್ಲ. ಅವರ ಭಾಷಣ ಕೇಳುತ್ತಿದ್ದರೆ ಯಾಕೆ ಅಂತ ಗೊತ್ತಾಗುತ್ತದೆ . ಜಿಲ್ಲೆಯ ಸತ್ತೇಗಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರೀ ಶಾಲೆಯೊಂದನ್ನು ಉದ್ಘಾಟಿಸಿದ ಬಳಿಕ ಮಾತಾಡಿದ ಮಂಜುನಾಥ, ಶಿಕ್ಷಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಆದ್ಯತೆ ನೀಡಿ ಮಕ್ಕಳ ಪೌಷ್ಠಿಕತೆಯ ಬಗ್ಗೆಯೂ ಯೋಚನೆ ಮಾಡುತ್ತಾರೆ, ಸರ್ಕಾರೀ ಶಾಲೆಯಲ್ಲಿ ಓದಿ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಮುಖ್ಯಮಂತ್ರಿಯವರಿಗೆ ಈ ಶಾಲೆಗಳಲ್ಲಿ ಓದುವ ಮಕ್ಕಳ ಬವಣೆ ಚೆನ್ನಾಗಿ ಗೊತ್ತು, ಅವರ ಸಮಗ್ರ ಬೆಳವಣಿಗೆಗೆ ಸಿದ್ದರಾಮಯ್ಯ ತೆಗೆದುಕೊಂಡಿರುವ ನಿರ್ಣಯಗಳು ಶ್ಲಾಘನೀಯ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಅಚ್ಚರಿಯ ಹೇಳಿಕೆ

Published on: Dec 07, 2024 03:48 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.