ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ
ಮಹದೇಶ್ವರ ಬೆಟ್ಟದ ಜಾತ್ರೆ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹನೂರು ತಾಲೂಕಿನ 4ನೇ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಲ್ಲಿ ಆತಂಕ ಮೂಡಿಸಿದೆ.
ಚಾಮರಾಜನಗರ, ಫೆ.13: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

