Virat Kohli Birthday: ವಿರಾಟ್ ಕೊಹ್ಲಿ ಹುಟ್ಟುಹಬ್ಬ, ಕೋಲಾರದಲ್ಲಿ ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಸಂಭ್ರಮ

Edited By:

Updated on: Nov 05, 2024 | 12:45 PM

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್​​ನಲ್ಲಿ ಆರ್​​ಸಿಬಿ ಆಟಗಾರನೂ ಆಗಿರುವ ಕೊಹ್ಲಿಗೆ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕೋಲಾರದಲ್ಲಿ ಅಭಿಮಾನಿಗಳು ಕೊಹ್ಲಿ ಬರ್ತ್​ಡೇ ಆಚರಣೆ ಮಾಡಿದ್ದು ಹೀಗೆ, ವಿಡಿಯೋ ನೋಡಿ.

ಕೋಲಾರ, ನವೆಂಬರ್ 5: ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಲ್ಲಿ ಕೊಹ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಮಯೂರ ಮತ್ತು ತಂಡದಿಂದ ಕಿಂಗ್ ಕೊಹ್ಲಿ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. 36ನೇ ಹುಟ್ಟುಹಬ್ಬದ ಪ್ರಯುಕ್ತ ಕೊಹ್ಲಿ ಕಟೌಟ್ ಹಾಕಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ