ಕುಮಾರಸ್ವಾಮಿ ಮತ್ತು ಯೋಗೇಶ್ವರ್ ಒಂದಾಗುತ್ತಿರೋದು ಸಂತಸದ ಸಂಗತಿ: ಡಿಕೆ ಶಿವಕುಮಾರ್

ಕುಮಾರಸ್ವಾಮಿ ಮತ್ತು ಯೋಗೇಶ್ವರ್ ಒಂದಾಗುತ್ತಿರೋದು ಸಂತಸದ ಸಂಗತಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 07, 2023 | 4:38 PM

ಮುಂಬರುವ ಲೋಕ ಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಯೋಗೇಶ್ವರ್ ಹೇಳಿದ್ದಾರೆ. ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರಸ್ತಾಪ ಮುಂದಿಡಬೇಕು ಅಂತಲೂ ಅವರು ಹೇಳಿದ್ದರು.

ಬೆಂಗಳೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅನಾರೋಗ್ಯದಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಭೇಟಿ ನೀಡು ಅವರ ಆರೋಗ್ಯ ವಿಚಾರಿಸಿದವರಲ್ಲಿ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ ಸಿಪಿ ಯೋಗೇಶ್ವರ್ (CP Yogeshwar) ಸಹ ಒಬ್ಬರು. ನಿನ್ನೆ ಹೇಳಿಕೆಯೊಂದನ್ನು ನೀಡಿರುವ ಯೋಗೇಶ್ವರ್ ಮುಂಬರುವ ಲೋಕ ಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದಿದ್ದಾರೆ. ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ವಿಷಯಕ್ಕೆ ಸಂಬಂಧಿಸಿದಂತೆ ಪ್ರಸ್ತಾಪ ಮುಂದಿಡಬೇಕು ಅಂತಲೂ ಅವರು ಹೇಳಿದ್ದರು. ಈ ಮಾತನ್ನು ಇಂದು ಬೆಂಗಳೂರಲ್ಲಿ ವಿಧಾನ ಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಗಮನಕ್ಕೆ ತಂದಾಗ ಅವರು ವ್ಯಂಗ್ಯವಾಗಿ ನಕ್ಕು ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಒಂದಾಗುತ್ತಿರುವುದೇ ಬಹಳ ಸಂತೋಷದ ಸಂಗತಿ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ