ಹೋಟೆಲ್ ಕಾರಿಡಾರ್ ಮೇಲೆ ನುಗ್ಗಿದ ಕಾರು; ಪ್ರೇಯಸಿಯ ಹುಟ್ಟುಹಬ್ಬಕ್ಕೆ ಬಂದಿದ್ದ ಯುವಕ ಸಾವು
ಉತ್ತರ ಪ್ರದೇಶದ ಹಾಪುರ್‌ನಲ್ಲಿ ಕಾರೊಂದು ಹೋಟೆಲ್‌ಗೆ ನುಗ್ಗಿ ಅಲ್ಲಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಒಬ್ಬರು ಸಾವನ್ನಪ್ಪಿದ್ದು, 3 ಜನರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶದ ಹಾಪುರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-9ರಲ್ಲಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದೃಶ್ಯ ವೈರಲ್ ಆಗಿದೆ.
ಹಾಪುರ್, ಜುಲೈ 1: ಸೋಮವಾರ ರಾತ್ರಿ ಉತ್ತರ ಪ್ರದೇಶದ ಹಾಪುರದ (Hapur) ರಾಷ್ಟ್ರೀಯ ಹೆದ್ದಾರಿ-9ರಲ್ಲಿರುವ ರಾಜಾ ಜಿ ಹವೇಲಿ ಹೋಟೆಲ್ ಹೊರಗೆ ನಿಂತಿದ್ದ ಜನರ ಮೇಲೆ ವೇಗವಾಗಿ ನುಗ್ಗಿದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಇದರಿಂದ ಯುವಕನೊಬ್ಬ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕ ತನ್ನ ಪ್ರೇಯಸಿಯ ಹುಟ್ಟುಹಬ್ಬವನ್ನು ಆಚರಿಸಲು ಹೋಟೆಲ್‌ಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಈ ಆಘಾತಕಾರಿ ಘಟನೆ ಹೋಟೆಲ್ ಹೊರಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋದಲ್ಲಿ ಹೋಟೆಲ್ ಹೊರಗೆ ಜನರು ನಿಂತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ ಒಂದು ಕಾರು ಅತಿ ವೇಗದಲ್ಲಿ ಬಂದು, ಜನರಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಬಾನೆಟ್ ಮೇಲೆ ಹಾರಿ ಕೆಳಗೆ ಬಿದ್ದಿದ್ದಾರೆ. ಓರ್ವ ಯುವಕ ಕಾರಿನಡಿ ಸಿಲುಕಿ ಮೃತಪಟ್ಟಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

