ಹರ್ ಘರ್ ತಿರಂಗಾ: ತಮ್ಮ ನಿವಾಸದ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಧ್ವಜವನ್ನು ಹಾರಿಸಿದರು

ಹರ್ ಘರ್ ತಿರಂಗಾ: ತಮ್ಮ ನಿವಾಸದ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಧ್ವಜವನ್ನು ಹಾರಿಸಿದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 13, 2022 | 10:47 AM

ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದ ಮುಂದೆ ತಿರಂಗವನ್ನು ಹಾರಿಸಿದರು

ಬೆಂಗಳೂರು: ಹರ್ ಘರ್ ತಿರಂಗಾ (Har Ghar Tiranga) ಅಭಿಯಾನ ಜೋರು ಹಿಡಿದಿದೆ ಮತ್ತು ರಾಜ್ಯದಲ್ಲಿ ಅನೇಕ ಜನ ತಮ್ಮ ತಮ್ಮ ಮನೆಗಳ ಮುಂದೆ ರಾಷ್ಟ್ರಧ್ವಜವನ್ನು (National Flag) ಹಾರಿಸಿದ್ದಾರೆ ಮತ್ತು ಹಾರಿಸುತ್ತಿದ್ದಾರೆ. ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದ ಮುಂದೆ ತಿರಂಗವನ್ನು ಹಾರಿಸಿದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಅವರೊಂದಿಗೆ ಕುಟುಂಬದ ಸದಸ್ಯರು ಮತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಇದ್ದರು.