VIDEO: ಪಾಕ್ ಆಟಗಾರನೊಂದಿಗೆ ಶೇಕ್ ಹ್ಯಾಂಡ್ ಮಾಡಿದ ಭಾರತೀಯ ಕ್ರಿಕೆಟಿಗ
Harbhajan Singh - Shahnawaz Dahani: ಅಬುಧಾಬಿ ಟಿ10 ಲೀಗ್ನಲ್ಲಿ ಆಸ್ಪಿನ್ ಸ್ಟಾಲಿಯನ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಹರ್ಭಜನ್ ಸಿಂಗ್ ನಾದರ್ನ್ ವಾರಿಯರ್ಸ್ ತಂಡದಲ್ಲಿದ್ದ ಪಾಕ್ ಆಟಗಾರ ಶಹನವಾಝ್ ದಹನಿಗೆ ಹಸ್ತಲಾಘವ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಬುಧಾಬಿಯಲ್ಲಿ ನಡೆಯುತ್ತಿರುವ ಟಿ10 ಲೀಗ್ ಪಂದ್ಯದ ವೇಳೆ ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಪಾಕಿಸ್ತಾನ್ ಆಟಗಾರ ಶಹನವಾಝ್ ದಹಾನಿಗೆ ಶೇಕ್ ಹ್ಯಾಂಡ್ ನೀಡಿ ಸುದ್ದಿಯಾಗಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಈ ಹಿಂದೆ ಹರ್ಭಜನ್ ಸಿಂಗ್ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದರು.
ಜುಲೈ 19 ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ವರ್ಲ್ಡ್ ಚಾಂಪಿಯನ್ಸ್ ಟೂರ್ನಿಯಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ಹಿಂದೇಟು ಹಾಕಿದ್ದರು. ಹೀಗಾಗಿ ಈ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.
ಇದೀಗ ಅಬುಧಾಬಿ ಟಿ10 ಲೀಗ್ನಲ್ಲಿ ಆಸ್ಪಿನ್ ಸ್ಟಾಲಿಯನ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಹರ್ಭಜನ್ ಸಿಂಗ್ ನಾದರ್ನ್ ವಾರಿಯರ್ಸ್ ತಂಡದಲ್ಲಿದ್ದ ಪಾಕ್ ಆಟಗಾರ ಶಹನವಾಝ್ ದಹನಿಗೆ ಹಸ್ತಲಾಘವ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಹಿಂದೆ “ರಕ್ತ ಮತ್ತು ಬೆವರು ಒಟ್ಟಿಗೆ ಇರಲು ಸಾಧ್ಯವಿಲ್ಲ” ಎಂದು ಪಾಕ್ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿರುವ ಹರ್ಭಜನ್ ಸಿಂಗ್ ಅವರು ಈಗ ಹೇಗೆ ಪಾಕ್ ಆಟಗಾರನಿಗೆ ಶೇಕ್ ಹ್ಯಾಂಡ್ ನೀಡುತ್ತಿದ್ದಾರೆ ಎಂದು ಅನೇಕರು ಪ್ರಶ್ನಿಸಿದ್ದಾರೆ.