IND vs SA: ಟಿ20ಯಲ್ಲಿ ಸಿಕ್ಸರ್‌ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ; ವಿಡಿಯೋ

Updated on: Dec 09, 2025 | 9:58 PM

Hardik Pandya: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 10 ತಿಂಗಳ ನಂತರ ಅರ್ಧಶತಕ ದಾಖಲಿಸಿದರು. ಕೇವಲ 25 ಎಸೆತಗಳಲ್ಲಿ 50 ರನ್ ಗಳಿಸಿ ಅಜೇಯರಾಗುಳಿದ ಪಾಂಡ್ಯ, ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ದರು. ಈ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ ಬಾರಿಸುವ ಮೂಲಕ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 100 ಸಿಕ್ಸರ್‌ಗಳ ದಾಖಲೆ ಪೂರೈಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು.

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿಯೇ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ದರು. ಈ ಪಂದ್ಯದಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದ ಹಾರ್ದಿಕ್ 10 ತಿಂಗಳಲ್ಲಿ ತಮ್ಮ ಮೊದಲ ಅರ್ಧಶತಕ ದಾಖಲಿಸಿದರು.

ಒಂದೆಡೆ ತಂಡದ ಉಳಿದ ಆಟಗಾರರು ರನ್​ಗಳಿಸಲು ಹೆಣಗಾಡುತ್ತಿದ್ದರೆ, ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಹಾರ್ದಿಕ್ ಪಾಂಡ್ಯ ಅವರ ಆರನೇ ಟಿ20 ಅಂತರರಾಷ್ಟ್ರೀಯ ಅರ್ಧಶತಕ ಮತ್ತು ಜನವರಿ 2025 ರ ನಂತರ ಅವರ ಮೊದಲ ಅರ್ಧಶತಕವಾಗಿತ್ತು.

ಪಾಂಡ್ಯ 28 ಎಸೆತಗಳಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 59 ರನ್ ಗಳಿಸಿ ಅಜೇಯರಾಗುಳಿದರು. ಗಮನಾರ್ಹವಾಗಿ ಈ ಪಂದ್ಯದಲ್ಲಿ ನಾಲ್ಕು ಸಿಕ್ಸರ್ ಬಾರಿಸಿದ ಹಾರ್ದಿಕ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 100 ಸಿಕ್ಸರ್‌ಗಳನ್ನು ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು. ಹಾರ್ದಿಕ್​ಗಿಂತ ಮೊದಲು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಈ ಸಾಧನೆ ಮಾಡಿದ್ದರು.