ಬ್ಯಾಟ್ ಎಸೆದು ಆಕ್ರೋಶ ಹೊರಹಾಕಿದ ಹಾರ್ದಿಕ್ ಪಾಂಡ್ಯ
India vs England, 3rd T20I: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್ಗಳಲ್ಲಿ 171 ರನ್ ಕಲೆಹಾಕಿತು. ಈ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 145 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ತಂಡವು ಮೂರನೇ ಟಿ20 ಪಂದ್ಯದಲ್ಲಿ 26 ರನ್ಗಳ ಜಯ ಸಾಧಿಸಿದೆ.
ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 171 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದು ಹಾರ್ದಿಕ್ ಪಾಂಡ್ಯ. ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಪಾಂಡ್ಯ ಕೊನೆಯ ಓವರ್ಗಳ ವೇಳೆ ಅಬ್ಬರಿಸುವ ಸೂಚನೆ ನೀಡಿದ್ದರು. ಆದರೆ ಟೀಮ್ ಇಂಡಿಯಾ ಗೆಲುವಿಗೆ 50 ರನ್ಗಳ ಅಗತ್ಯತೆಯಿದ್ದಾಗ, ಹಾರ್ದಿಕ್ ಪಾಂಡ್ಯ ಔಟಾದರು.
ಜೇಮಿ ಓವರ್ಟನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಯತ್ನದಲ್ಲಿ ಪಾಂಡ್ಯ ಬೌಂಡರಿ ಲೈನ್ನಲ್ಲಿದ್ದ ಜೋಸ್ ಬಟ್ಲರ್ಗೆ ಕ್ಯಾಚ್ ನೀಡಿದರು. ನಿರ್ಣಾಯಕ ಹಂತದಲ್ಲಿ ವಿಕೆಟ್ ಕೈಚೆಲ್ಲಿದ್ದರಿಂದ ಆಕ್ರೋಶಗೊಂಡ ಹಾರ್ದಿಕ್ ಮೈದಾನದಲ್ಲೇ ತಮ್ಮ ಕೋಪ ತಾಪವನ್ನು ಪ್ರದರ್ಶಿಸಿದರು.
ಅತ್ತ ಜೋಸ್ ಬಟ್ಲರ್ ಕ್ಯಾಚ್ ಹಿಡಿಯುತ್ತಿದ್ದಂತೆ ಇತ್ತ ಹಾರ್ದಿಕ್ ಪಾಂಡ್ಯ ತಮ್ಮ ಬ್ಯಾಟ್ ಅನ್ನು ನೆಲಕ್ಕೆ ಎಸೆದಿದ್ದಾರೆ. ಈ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಪಾಂಡ್ಯರ ಕೋಪತಾಪದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 172 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 145 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ತಂಡವು ಮೂರನೇ ಟಿ20 ಪಂದ್ಯದಲ್ಲಿ 26 ರನ್ಗಳ ಜಯ ಸಾಧಿಸಿದೆ.