AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ?

ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ?

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 27, 2026 | 5:26 PM

Share

ಪಂಚಮಸಾಲಿ ಪೀಠದ ಧರ್ಮದರ್ಶಿ ಬಿಸಿ ಉಮಾಪತಿ ಅವರು 2008 ರಿಂದ 2026 ರವರೆಗಿನ ಹರಿಹರ ಮಠದ ಲೆಕ್ಕಪತ್ರಗಳನ್ನು ಮಂಡಿಸಿದ್ದಾರೆ. ಭಕ್ತರು ಮತ್ತು ಸರ್ಕಾರದಿಂದ ಸಂಗ್ರಹವಾದ ಒಟ್ಟು 27 ಕೋಟಿ 61 ಲಕ್ಷ 57 ಸಾವಿರದ 518 ರೂಪಾಯಿಗಳ ವಿವರ ನೀಡಿದರು. ಲೆಕ್ಕ ಕೊಡಿ ಚಳುವಳಿಯು ಸ್ವಾಮೀಜಿ ಮಾಡಿದ ತಪ್ಪುಗಳನ್ನು ಮರೆಮಾಚಲು ಮಾಡಿದ ತಂತ್ರ ಎಂದು ಉಮಾಪತಿ ಆರೋಪಿಸಿದರು, ಆದರೆ ಟ್ರಸ್ಟ್ ಯಾವಾಗಲೂ ಪಾರದರ್ಶಕವಾಗಿದೆ ಎಂದು ಸ್ಪಷ್ಟಪಡಿಸಿದರು.

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್​ನ ಧರ್ಮದರ್ಶಿ ಬಿ.ಸಿ.ಉಮಾಪತಿ 2008ರಿಂದ 2026ರವರೆಗಿನ ಲೆಕ್ಕವನ್ನು ಮಂಡಿಸಿದರು.  ಸರ್ಕಾರ ಮತ್ತು ಭಕ್ತಾದಿಗಳಿಂದ ಕಳೆದ 18 ವರ್ಷಗಳಲ್ಲಿ ಒಟ್ಟು 27 ಕೋಟಿ 61 ಲಕ್ಷ 57 ಸಾವಿರದ 518 ರೂ ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಂಚಮಸಾಲಿ ಟ್ರಸ್ಟ್ ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಪ್ರತಿ ವರ್ಷ ಸರ್ಕಾರಕ್ಕೆ ಮತ್ತು ಮಾಸಿಕವಾಗಿ ಟ್ರಸ್ಟ್ ಸಭೆಗಳಲ್ಲಿ ಲೆಕ್ಕ ನೀಡಲಾಗುತ್ತದೆ. ಪಂಚಮಸಾಲಿ ಚಾರಿಟಬಲ್ ಟ್ರಸ್ಟ್, ಸಾರ್ವಜನಿಕರಿಗೆ ಲೆಕ್ಕ ಕೊಡುವಂತಿಲ್ಲ, ಆದರೆ ನಾವು ಈಗಾಗಲೇ ಲೆಕ್ಕಾ ಕೊಟ್ಟಿದ್ದೇವೆ. ಶ್ರೀಗಳು ಮಾಡಿದ ತಪ್ಪು ಮುಚ್ಚಿಕೊಳ್ಳಲು ಲೆಕ್ಕ ಕೊಡಿ ಚಳವಳಿ ಆರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More