ಹರಿಹರೇಶ್ವರ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 24, 2024 | 8:07 PM

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಇರುವ ಹರಿಹರೇಶ್ವರ ಪುಣ್ಯಕ್ಷೇತ್ರದಲ್ಲಿ ಭಾರತ ಹುಣ್ಣಿಮೆಯ ಆಸುಪಾಸು ವಿಶೇಷ ಹರಿಹರೇಶ್ವರನ ಬ್ರಹ್ಮರಥೋತ್ಸವ ನಡೆಯುತ್ತದೆ. ಹರಿ ಮತ್ತು ಹರ ಒಂದೇ ಕಡೆ ಪೂಜಿಸಲ್ಪಡುವ ಜಗತ್ತಿನ ಏಕೈಕ ಪುಣ್ಯಕ್ಷೇತ್ರ ಇದಾಗಿದ್ದು, ಈ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಫೆಗೆ ಭಾಜನರಾದರು.

ದಾವಣಗೆರೆ, ಫೆ.24: ಹರಿಹರದ ಹರಿಹರೇಶ್ವರ ಬ್ರಹ್ಮರಥೋತ್ಸವ(Harihareshwara Brahma Rathotsava) ಇಂದು ನೆರವೇರಿದ್ದು, ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಫೆಗೆ ಭಾಜನರಾದರು. ಹೌದು, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಇರುವ ಹರಿಹರೇಶ್ವರ ಪುಣ್ಯಕ್ಷೇತ್ರದಲ್ಲಿ ಭಾರತ ಹುಣ್ಣಿಮೆಯ ಆಸುಪಾಸು ವಿಶೇಷ ಬ್ರಹ್ಮರಥೋತ್ಸವ ನಡೆಯುತ್ತದೆ. ಹರಿ ಮತ್ತು ಹರ ಒಂದೇ ಕಡೆ ಪೂಜಿಸಲ್ಪಡುವ ಜಗತ್ತಿನ ಏಕೈಕ ಪುಣ್ಯಕ್ಷೇತ್ರ ಇದಾಗಿದ್ದು, ರಥ ಬೀದಿಯಲ್ಲಿ‌ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತ ಸಾಗರ ಹರಿಹರೇಶ್ವರಗೆ ಹರಕೆ ಪೂರೈಸಿದರು. ನವ ವಿವಾಹಿತರು ಸಹ ಪಾಲ್ಗೊಂಡು ಭಕ್ತಿ ಅರ್ಪಣೆ ಮಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More