ಪರಸ್ಪರ ಪ್ರೀತಿಸುತ್ತಿದ್ದ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ (Vasishta Simha) ಅವರು ಇಂದು (ಜ.26) ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯುತ್ತಿದೆ. ಸೆಲೆಬ್ರಿಟಿ ಮದುವೆಯ (SimhaPriya Marriage) ಪ್ರಯುಕ್ತ ಆಶ್ರಮದ ವಾತಾವರಣ ಸಿಂಗಾರಗೊಂಡಿದೆ. ಕನ್ನಡ ಚಿತ್ರರಂಗದ ಅನೇಕ ಗಣ್ಯರು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿವಾಹಕ್ಕೆ ಸಾಕ್ಷಿ ಆಗುತ್ತಿದ್ದಾರೆ. ತುಂಬ ಅದ್ದೂರಿಯಾಗಿ ನಡೆಯುತ್ತಿರುವ ಈ ಮದುವೆಗೆ ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ನಂತರ ಬೆಂಗಳೂರಿನಲ್ಲಿ ರಿಸೆಪ್ಷನ್ ನಡೆಸಲು ಈ ಜೋಡಿ ತೀರ್ಮಾನಿಸಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.