SimhaPriya Marriage: ಮೈಸೂರಲ್ಲಿ ವಸಿಷ್ಠ ಸಿಂಹ ಹರಿಪ್ರಿಯಾ ಅದ್ದೂರಿ ವಿವಾಹ; ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಹಾಜರಿ

Edited By:

Updated on: Jan 26, 2023 | 12:37 PM

Haripriya Vasishta Simha Wedding: ಕನ್ನಡ ಚಿತ್ರರಂಗದ ಅನೇಕ ಗಣ್ಯರು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿವಾಹಕ್ಕೆ ಸಾಕ್ಷಿ ಆಗುತ್ತಿದ್ದಾರೆ. ತುಂಬ ಅದ್ದೂರಿಯಾಗಿ ಈ ಮದುವೆ ನಡೆಯುತ್ತಿದೆ.

ಪರಸ್ಪರ ಪ್ರೀತಿಸುತ್ತಿದ್ದ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ (Vasishta Simha) ಅವರು ಇಂದು (ಜ.26) ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯುತ್ತಿದೆ. ಸೆಲೆಬ್ರಿಟಿ ಮದುವೆಯ (SimhaPriya Marriage) ಪ್ರಯುಕ್ತ ಆಶ್ರಮದ ವಾತಾವರಣ ಸಿಂಗಾರಗೊಂಡಿದೆ. ಕನ್ನಡ ಚಿತ್ರರಂಗದ ಅನೇಕ ಗಣ್ಯರು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿವಾಹಕ್ಕೆ ಸಾಕ್ಷಿ ಆಗುತ್ತಿದ್ದಾರೆ. ತುಂಬ ಅದ್ದೂರಿಯಾಗಿ ನಡೆಯುತ್ತಿರುವ ಈ ಮದುವೆಗೆ ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ನಂತರ ಬೆಂಗಳೂರಿನಲ್ಲಿ ರಿಸೆಪ್ಷನ್​ ನಡೆಸಲು ಈ ಜೋಡಿ ತೀರ್ಮಾನಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Jan 26, 2023 10:14 AM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More