ನಟಿ ಹರಿಪ್ರಿಯಾ (Haripriya) ಹಾಗೂ ನಟ ವಸಿಷ್ಠ ಸಿಂಹ ಮದುವೆಯಾಗಿ ಕೆಲವು ತಿಂಗಳುಗಳು ಕಳೆದಿವೆ. ಈ ಇಬ್ಬರೂ ಪ್ರೇಮಿಗಳಿದ್ದಾಗ ಒಟ್ಟಿಗೆ ನಟಿಸಿದ ಸಿನಿಮಾ ಯದಾ ಯದಾ ಹಿ ಈಗ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ, ಸಿನಿಮಾದಲ್ಲಿ ನಟಿಸಿದ ಅನುಭವದ ಬಗ್ಗೆ ಮಾತನಾಡಿದರು. ಆ ಸಂದರ್ಭದಲ್ಲಿ ನಟಿ ಹರಿಪ್ರಿಯಾ ಈ ಸಿನಿಮಾ ತಮಗೆ ಬಹಳ ವಿಶೇಷವಾದುದು ಎಂದು ಹೇಳಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ