‘ನಾನು ಮಾಡಿದ್ದು ಸಾರ್ಥಕ ಎನಿಸಿದೆ’; ‘ಜೊತೆ ಜೊತೆಯಲಿ’ ಧಾರಾವಾಹಿ ಬಗ್ಗೆ ಹರೀಶ್ ರಾಜ್ ಮಾತು

Updated on: Apr 08, 2023 | 9:18 AM

ಆರಂಭದಲ್ಲಿ ಹರೀಶ್ ರಾಜ್​ ಅವರನ್ನು ಜನರು ಒಪ್ಪಿಕೊಂಡಿರಲಿಲ್ಲ. ಈಗ ಜನರು ಅವರನ್ನು ಇಷ್ಟಪಟ್ಟಿದ್ದಾರೆ. ಆ ಬಗ್ಗೆ ಹರೀಶ್ ರಾಜ್ ಮಾತನಾಡಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ (Jothe Jotheyali Serial) ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರವನ್ನು ಅನಿರುದ್ಧ್​ ಮಾಡುತ್ತಿದ್ದರು. ಅವರು ಧಾರಾವಾಹಿ ತಂಡದಿಂದ ಹೊರ ನಡೆದ ನಂತರ ಹರೀಶ್ ರಾಜ್ ಅವರು ಈ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಆರಂಭದಲ್ಲಿ ಹರೀಶ್ ರಾಜ್​ ಅವರನ್ನು ಜನರು ಒಪ್ಪಿಕೊಂಡಿರಲಿಲ್ಲ. ಈಗ ಜನರು ಅವರನ್ನು ಇಷ್ಟಪಟ್ಟಿದ್ದಾರೆ. ಆ ಬಗ್ಗೆ ಹರೀಶ್ ರಾಜ್ (Harish Raj) ಮಾತನಾಡಿದ್ದಾರೆ. ‘ಉಂಡೆನಾಮ’ ಸಿನಿಮಾದಲ್ಲಿ ಹರೀಶ್ ರಾಜ್ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More